ಈ ಲಿಸ್ಟ್ ನಲ್ಲಿ ಹೆಸರು ಇದ್ದವರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ರೂ. 2000. ನಿಮ್ಮ ಹೆಸರು ಈ ಲಿಸ್ಟ್ ನಲ್ಲಿದಿಯೇ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.
ಕರ್ನಾಟಕ ಸರ್ಕಾರದ (Karnataka government ) ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ (Guarantee scheme ) ಒಂದಾದ ಗೃಹಲಕ್ಷ್ಮಿ (Gruhalakshmi) ಯೋಜನೆಗೆ ಜುಲೈ 19ನೇ ತಾರೀಖಿನಿಂದ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಸರ್ಕಾರ ಸೂಚಿಸಿರುವ ಸೇವಾಕೇಂದ್ರಗಳಾದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತಿದೆ.
ಸರ್ಕಾರಿ ಹುದ್ದೆಯಲ್ಲಿರುವ ಕುಟುಂಬಗಳು ಹಾಗೂ ಜಿಎಸ್‌ಟಿ ರಿಟರ್ನರ್ಸ್ ಮತ್ತು ಇನ್ಕಮ್ ಟ್ಯಾಕ್ಸ್ ಪೇಯರ್ಸ್ ಕುಟುಂಬಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕುಟುಂಬದ ಯಜಮಾನಿಯರು ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ರೇಷನ್ ಕಾರ್ಡ್ ಸಂಖ್ಯೆ (Ration card) ಆಧಾರ್ ಕಾರ್ಡ್ ಸಂಖ್ಯೆ (Aadhar card)ಮತ್ತು ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು (mobile no.) ಕೇಳಲಾಗುತ್ತದೆ ಮತ್ತು ಅರ್ಜಿ ಸಲ್ಲಿಸುವಾಗ ಯಾವುದೇ ಬ್ಯಾಂಕ್ ಖಾತೆ ವಿವರವನ್ನು (bank account details) ಅವಶ್ಯಕತೆ ಇಲ್ಲ.
ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಹರಿದ್ದೀರಾ ಎನ್ನುವುದನ್ನು ಈ ಅರ್ಹತಾ ಪಟ್ಟಿಯಲ್ಲಿ ಪರಿಶೀಲಿಸಬಹುದು, ಅದಕ್ಕಾಗಿ ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ