ಶಕ್ತಿ ಯೋಜನೆಯ ಉಚಿತ ಬಸ್ ಪಾಸ್ ಪಡೆಯುವುದು ಹೇಗೆ ನೋಡಿ.!

 


ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಾದ (Karnataka Government Guarantee Scheme)  ಶಕ್ತಿ ಯೋಜನೆ (Shakthi Yojane) ( Free bus to women ) ಈಗಾಗಲೇ ಜಾರಿಗೆ ತರಲಾಗಿದೆ. ಜೂನ್ 11, 2023 ರಿಂದ ಕರ್ನಾಟಕದ ರಾಜ್ಯದ ಎಲ್ಲಾ ಮಹಿಳೆಯರು ಕೂಡ ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಕರ್ನಾಟಕದ ಗಡಿಯೊಳಗೆ ಉಚಿತವಾಗಿ ( Free travel ) ಪ್ರಯಾಣಿಸುತ್ತಿದ್ದಾರೆ.

ಈ ಹಿಂದೆ ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಜಾರಿಗೆ ಬಂದ ದಿನ ಕೆಲವು ಮಹಿಳೆಯರಿಗೆ ಸಾಂಕೇತಿಕವಾಗಿ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ( smart card ) ನ್ನು ವಿತರಣೆ ಮಾಡಲಾಗಿತ್ತು. ತದ ನಂತರದ ಮೂರು ತಿಂಗಳ ಒಳಗೆ ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ರಾಜ್ಯದ ಎಲ್ಲಾ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ತಿಳಿಸಿತ್ತು.  ಅದರಂತೆ  ಶಕ್ತಿ ಸ್ಮಾರ್ಟ್ ಕಾರ್ಡ್ ಹೊಂದದ ಮಹಿಳೆಯರಿಗೆ ಮೂರು ತಿಂಗಳ ನಂತರ ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ. 

ಅಲ್ಲಿಯವರೆಗೂ ರಾಜ್ಯ ಅಥವಾ ಕೇಂದ್ರ ಸರ್ಕಾರ ನೀಡಿರುವ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ತೋರಿಸಿ ಶೂನ್ಯ ದರ ಟಿಕೆಟ್ (ಟಿಕೆಟ್) ಪಡೆದು ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವರು ತಿಳಿಸಿದ್ದರು.

ಆದರೆ ಇತ್ತೀಚೆಗೆ ಬಂದಿರುವ ಮಾಹಿತಿ ಪ್ರಕಾರ ಶೀಘ್ರವೇ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಬದಲಾಗಿ ಪಾಸ್ ನೀಡಲು ಸರ್ಕಾರ ಮುಂದಾಗಿದೆ ಎನದು ತಿಳಿದು ಬಂದಿದೆ. ಈ ಬಗ್ಗೆ ಇತ್ತೀಚಿಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾನ್ಯ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ (Transport Minister Ramalinga Reddy) ಇದರ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸ್ಮಾರ್ಟ್ ಕಾರ್ಡ್ಗಳನ್ನು ಅಭಿವೃದ್ಧಿಪಡಿಸುವ ಸೆಂಟರ್ ಫಾರ್ ಈ ಆಡಳಿತ (CEG) ಅಧಿಕಾರಿಗಳೊಂದಿಗೆ ನಾವು ಈ ಕುರಿತು ಮಾತುಕತೆ ನಡೆಸಿದ್ದೆವು. ಮೂರು ಕೋಟಿ ಸ್ಮಾರ್ಟ್ ಕಾರ್ಡುಗಳಿಗೆ ಬೇಡಿಕೆ ಇಟ್ಟಿದ್ದೇವು. ಆದರೆ CEG ಇದಕ್ಕೆ ನಿರಾಕರಣೆ ಮಾಡಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸ್ಮಾರ್ಟ್ ಕಾರ್ಡ್ ಗಳನ್ನು ತಯಾರಿಸಿ ವಿತರಣೆ ಮಾಡಲು CEG ಅನುಮತಿಸದ ಕಾರಣ ಈ ಶಕ್ತಿ ಸ್ಮಾರ್ಟ್ ಕಾರ್ಡ್ ಬದಲಾಗಿ ಸಾಮಾನ್ಯ ಬಸ್ ಪಾಸ್ ಗಳನ್ನು ಹೋಲುವ ರೀತಿಯಲ್ಲಿ ಶಕ್ತಿ ಪಾಸ್ ಗಳನ್ನು ನೀಡಲು ನಿರ್ಧಾರಕ್ಕೆ ಬಂದಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

ಆದರೆ ಶಕ್ತಿ ಯೋಜನೆಯ ಅರ್ಜಿ ಸಲ್ಲಿಕೆಯ ಬಗ್ಗೆ ಯಾವುದೇ ಪ್ರಕ್ರಿಯೆ ಪ್ರಾರಂಭವಾಗುವ ಅಥವಾ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಪೂರ್ತಿಯಾದ ಮಾಹಿತಿ ಇನ್ನೂ ತಿಳಿದು ಬಂದಿರುವುದಿಲ್ಲ. 


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವಿಶ್ವದ ಶ್ರೀಮಂತ ಮಹಿಳೆಯನ್ನು ಭೇಟಿ ಮಾಡಿ, ಇವರು ಭಾರತೀಯರಲ್ಲ, ಮಸ್ಕ್ ಗೆ ಯಾವುದೇ ಹೊಂದಾಣಿಕೆ ಇಲ್ಲ, ಮುಕೆಶ್ ಅಂಬಾನಿ, ರತನ್ ಟಾಟಾ, ಅದಾನಿ, ನಿವ್ವಳ ಮೌಲ್ಯ..!

ತೋಟಗಾರಿಕಾ ಇಲಾಖೆಯಲ್ಲಿ 4319 ಬ್ರಹತ್ ನೇಮಕಾತಿ 2023. KSHD Recruitment 2023

ಅಯೋಧ್ಯೆಯ ಮಂದಿರಕ್ಕೆ ವಿಶ್ವದ ಅತಿ ದೊಡ್ಡ ಬೀಗ ! ಆಲಿಗಢ ವ್ಯಕ್ತಿಯಿಂದ 400 ಕೆಜಿ ಭಾರದ ಬೀಗ ತಯಾರಿ !